Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 2

ರೋಮಾ 2:7-15

Help us?
Click on verse(s) to share them!
7ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
8ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
9ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
10ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
11ದೇವರಲ್ಲಿ ಪಕ್ಷಪಾತವಿಲ್ಲ.
12ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
13ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
14ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
15ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.

Read ರೋಮಾ 2ರೋಮಾ 2
Compare ರೋಮಾ 2:7-15ರೋಮಾ 2:7-15