Text copied!
Bibles in Kannada

ರೋಮಾ 2:9-13 in Kannada

Help us?

ರೋಮಾ 2:9-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
10 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
11 ದೇವರಲ್ಲಿ ಪಕ್ಷಪಾತವಿಲ್ಲ.
12 ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
13 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
ರೋಮಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019