Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 3

ರೋಮಾ 3:13-28

Help us?
Click on verse(s) to share them!
13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
14ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
16ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
17ಸಮಾಧಾನದ ಮಾರ್ಗವನ್ನೇ ಅರಿಯರು.
18ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
19ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
20ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
21ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
22ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
24ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
25ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
26ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
27ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
28ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ

Read ರೋಮಾ 3ರೋಮಾ 3
Compare ರೋಮಾ 3:13-28ರೋಮಾ 3:13-28