Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 3

ರೋಮಾ 3:7-18

Help us?
Click on verse(s) to share them!
7ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
8“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
9ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
10ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
12ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
14ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
16ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
17ಸಮಾಧಾನದ ಮಾರ್ಗವನ್ನೇ ಅರಿಯರು.
18ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.

Read ರೋಮಾ 3ರೋಮಾ 3
Compare ರೋಮಾ 3:7-18ರೋಮಾ 3:7-18