Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 4

ರೋಮಾ 4:14-20

Help us?
Click on verse(s) to share them!
14ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
15ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
16ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
17“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
18“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
19ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

Read ರೋಮಾ 4ರೋಮಾ 4
Compare ರೋಮಾ 4:14-20ರೋಮಾ 4:14-20