Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 6

ರೋಮಾ 6:5-15

Help us?
Click on verse(s) to share them!
5ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
12ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.

Read ರೋಮಾ 6ರೋಮಾ 6
Compare ರೋಮಾ 6:5-15ರೋಮಾ 6:5-15