Text copied!
Bibles in Kannada

ರೋಮಾ 6:5-15 in Kannada

Help us?

ರೋಮಾ 6:5-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6 ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8 ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10 ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11 ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
12 ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13 ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14 ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ರೋಮಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019