Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 7

ರೋಮಾ 7:16-24

Help us?
Click on verse(s) to share them!
16ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.
17ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
18ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
19ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
20ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
21ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
22ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.
23ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.
24ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?

Read ರೋಮಾ 7ರೋಮಾ 7
Compare ರೋಮಾ 7:16-24ರೋಮಾ 7:16-24