Text copied!
Bibles in Kannada

ರೋಮಾ 7:4-11 in Kannada

Help us?

ರೋಮಾ 7:4-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
5 ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
7 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
8 ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
10 ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
11 ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
ರೋಮಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019