Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 7

ರೋಮಾ 7:9-15

Help us?
Click on verse(s) to share them!
9ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
10ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
11ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
12ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
13ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
14ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
15ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.

Read ರೋಮಾ 7ರೋಮಾ 7
Compare ರೋಮಾ 7:9-15ರೋಮಾ 7:9-15