Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 8

ರೋಮಾ 8:2-18

Help us?
Click on verse(s) to share them!
2ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
3ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
4ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
5ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
6ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
7ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
8ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
9ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
10ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
11ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
12ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
13ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
14ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
15ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
16ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
17ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.

Read ರೋಮಾ 8ರೋಮಾ 8
Compare ರೋಮಾ 8:2-18ರೋಮಾ 8:2-18