Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 10

ಲೂಕ 10:13-25

Help us?
Click on verse(s) to share them!
13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
23ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
24ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
25ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

Read ಲೂಕ 10ಲೂಕ 10
Compare ಲೂಕ 10:13-25ಲೂಕ 10:13-25