Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 10

ಲೂಕ 10:25-34

Help us?
Click on verse(s) to share them!
25ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
26ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
27ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
28ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
29ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
31ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
33ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.

Read ಲೂಕ 10ಲೂಕ 10
Compare ಲೂಕ 10:25-34ಲೂಕ 10:25-34