Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 10

ಲೂಕ 10:4-20

Help us?
Click on verse(s) to share them!
4ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
5ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
6ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
7ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
8ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
9ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
10ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
12ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.
16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

Read ಲೂಕ 10ಲೂಕ 10
Compare ಲೂಕ 10:4-20ಲೂಕ 10:4-20