Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 11

ಲೂಕ 11:18-37

Help us?
Click on verse(s) to share them!
18ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
19ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.
21“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;
22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
24“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
25ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,
26ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.
31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
33“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
34ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
35ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.
36ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.
37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.

Read ಲೂಕ 11ಲೂಕ 11
Compare ಲೂಕ 11:18-37ಲೂಕ 11:18-37