Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 11

ಲೂಕ 11:37-48

Help us?
Click on verse(s) to share them!
37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.
41ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
42“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
43“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.
44ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು.
45ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
46ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
47ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
48ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.

Read ಲೂಕ 11ಲೂಕ 11
Compare ಲೂಕ 11:37-48ಲೂಕ 11:37-48