Text copied!
Bibles in Kannada

ಲೂಕ 11:48-50 in Kannada

Help us?

ಲೂಕ 11:48-50 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
49 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
50 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
ಲೂಕ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019