Text copied!
Bibles in Kannada

ಲೂಕ 12:10-17 in Kannada

Help us?

ಲೂಕ 12:10-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
11 ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
12 ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
13 ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
14 ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
15 ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
16 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
ಲೂಕ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019