Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 12

ಲೂಕ 12:39-48

Help us?
Click on verse(s) to share them!
39ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
40ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
41ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
42ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.
44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
45ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.

Read ಲೂಕ 12ಲೂಕ 12
Compare ಲೂಕ 12:39-48ಲೂಕ 12:39-48