Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 12

ಲೂಕ 12:48-57

Help us?
Click on verse(s) to share them!
48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
49“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
50ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
51ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
52ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
53ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
54ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
56ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
57“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?

Read ಲೂಕ 12ಲೂಕ 12
Compare ಲೂಕ 12:48-57ಲೂಕ 12:48-57