Text copied!
Bibles in Kannada

ಲೂಕ 12:52-56 in Kannada

Help us?

ಲೂಕ 12:52-56 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
53 ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
54 ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
56 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
ಲೂಕ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019