Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 13

ಲೂಕ 13:1-12

Help us?
Click on verse(s) to share them!
1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
2ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
4ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
5ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
6ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
7ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
8ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
9ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
10ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
11ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ

Read ಲೂಕ 13ಲೂಕ 13
Compare ಲೂಕ 13:1-12ಲೂಕ 13:1-12