Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 13

ಲೂಕ 13:13-31

Help us?
Click on verse(s) to share them!
13ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
14ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
15ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
16ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
17ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
18ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
19ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
20ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
22ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
23ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
24ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
25ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
27ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
28ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
30ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
31ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,

Read ಲೂಕ 13ಲೂಕ 13
Compare ಲೂಕ 13:13-31ಲೂಕ 13:13-31