Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 13

ಲೂಕ 13:31-34

Help us?
Click on verse(s) to share them!
31ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
32ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
33ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
34ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

Read ಲೂಕ 13ಲೂಕ 13
Compare ಲೂಕ 13:31-34ಲೂಕ 13:31-34