Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 14

ಲೂಕ 14:19-28

Help us?
Click on verse(s) to share them!
19ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
20ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
21ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
22ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.
23ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
24ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
26“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?

Read ಲೂಕ 14ಲೂಕ 14
Compare ಲೂಕ 14:19-28ಲೂಕ 14:19-28