Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 14

ಲೂಕ 14:28-34

Help us?
Click on verse(s) to share them!
28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,
30‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
32ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
34“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?

Read ಲೂಕ 14ಲೂಕ 14
Compare ಲೂಕ 14:28-34ಲೂಕ 14:28-34