Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 15

ಲೂಕ 15:17-27

Help us?
Click on verse(s) to share them!
17ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.
18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
19ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,
20ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
21ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
22ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
23ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.
24ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
25ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
26ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.
27ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.

Read ಲೂಕ 15ಲೂಕ 15
Compare ಲೂಕ 15:17-27ಲೂಕ 15:17-27