Text copied!
Bibles in Kannada

ಲೂಕ 15:17-27 in Kannada

Help us?

ಲೂಕ 15:17-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.
18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.
19 ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,
20 ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.
21 ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,
22 ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,
23 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ.
24 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.
25 ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,
26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.
27 ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.
ಲೂಕ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019