Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 15

ಲೂಕ 15:4-11

Help us?
Click on verse(s) to share them!
4ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,
6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
11ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.

Read ಲೂಕ 15ಲೂಕ 15
Compare ಲೂಕ 15:4-11ಲೂಕ 15:4-11