Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 15

ಲೂಕ 15:7-14

Help us?
Click on verse(s) to share them!
7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
8“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?
9ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.
10ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.
11ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.
12ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.
13ಸ್ವಲ್ಪ ದಿನದ ಮೇಲೆ ಆ ಕಿರಿಯ ಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು.
14ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.

Read ಲೂಕ 15ಲೂಕ 15
Compare ಲೂಕ 15:7-14ಲೂಕ 15:7-14