Text copied!
Bibles in Kannada

ಲೂಕ 16:14-19 in Kannada

Help us?

ಲೂಕ 16:14-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
15 ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16 “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
17 ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
18 “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
19 “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
ಲೂಕ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019