Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 16

ಲೂಕ 16:15-26

Help us?
Click on verse(s) to share them!
15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
16“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
17ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
18“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
19“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
20ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.
21ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,
24‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
25ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.

Read ಲೂಕ 16ಲೂಕ 16
Compare ಲೂಕ 16:15-26ಲೂಕ 16:15-26