Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 16

ಲೂಕ 16:23-30

Help us?
Click on verse(s) to share them!
23ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,
24‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
25ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
26ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
27ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
28ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
29ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,
30ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.

Read ಲೂಕ 16ಲೂಕ 16
Compare ಲೂಕ 16:23-30ಲೂಕ 16:23-30