Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 16

ಲೂಕ 16:7-15

Help us?
Click on verse(s) to share them!
7ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
8ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.
9“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.
10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
14ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

Read ಲೂಕ 16ಲೂಕ 16
Compare ಲೂಕ 16:7-15ಲೂಕ 16:7-15