Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 17

ಲೂಕ 17:1-5

Help us?
Click on verse(s) to share them!
1ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
2ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
5ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,

Read ಲೂಕ 17ಲೂಕ 17
Compare ಲೂಕ 17:1-5ಲೂಕ 17:1-5