Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 17

ಲೂಕ 17:11-25

Help us?
Click on verse(s) to share them!
11ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
13“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
14ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
15ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
16ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
17ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
18ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
19ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
20ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
21‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
22ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
23ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
24ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
25ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.

Read ಲೂಕ 17ಲೂಕ 17
Compare ಲೂಕ 17:11-25ಲೂಕ 17:11-25