7“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
8ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
9ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
10ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
11ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
12ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,