Text copied!
Bibles in Kannada

ಲೂಕ 18:37-43 in Kannada

Help us?

ಲೂಕ 18:37-43 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
38 ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
39 ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
40 ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
41 ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
42 ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
43 ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
ಲೂಕ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019