Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 19

ಲೂಕ 19:32-39

Help us?
Click on verse(s) to share them!
32ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ
34ಅವರು, “ಇದು ಕರ್ತನಿಗೆ ಬೇಕಾಗಿದೆ” ಎಂದು ಹೇಳಿದರು.
35ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.
36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
38“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.
39ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ,

Read ಲೂಕ 19ಲೂಕ 19
Compare ಲೂಕ 19:32-39ಲೂಕ 19:32-39