Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 19

ಲೂಕ 19:4-12

Help us?
Click on verse(s) to share them!
4ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
5ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
6ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
7ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
8ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.
9ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
10ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
11ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
12ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.

Read ಲೂಕ 19ಲೂಕ 19
Compare ಲೂಕ 19:4-12ಲೂಕ 19:4-12