Text copied!
Bibles in Kannada

ಲೂಕ 19:9-20 in Kannada

Help us?

ಲೂಕ 19:9-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.
10 ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.
11 ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.
12 ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
13 ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
14 ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
15 ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
16 ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,
17 ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
18 ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು,
19 ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
20 ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.
ಲೂಕ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019