Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 1

ಲೂಕ 1:1-13

Help us?
Click on verse(s) to share them!
1ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
2ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,
3ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.
4ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
5ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
7ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.
8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.
9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.
12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

Read ಲೂಕ 1ಲೂಕ 1
Compare ಲೂಕ 1:1-13ಲೂಕ 1:1-13