Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 1

ಲೂಕ 1:33-48

Help us?
Click on verse(s) to share them!
33ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.
34ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.
35ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
36ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
37ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.
38ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.
40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.
41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.
42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.
43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?
44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.
45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.
48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,

Read ಲೂಕ 1ಲೂಕ 1
Compare ಲೂಕ 1:33-48ಲೂಕ 1:33-48