Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 1

ಲೂಕ 1:54-72

Help us?
Click on verse(s) to share them!
54ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.
56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
57ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.
58ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
59ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
60ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,
61ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.
62ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.
63ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.
65ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.
66ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
67ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,
68“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;
69ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
70ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ,
71ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.
72ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.

Read ಲೂಕ 1ಲೂಕ 1
Compare ಲೂಕ 1:54-72ಲೂಕ 1:54-72