Text copied!
Bibles in Kannada

ಲೂಕ 1:57-63 in Kannada

Help us?

ಲೂಕ 1:57-63 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.
58 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
59 ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
60 ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,
61 ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.
62 ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.
63 ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
ಲೂಕ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019