Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 1

ಲೂಕ 1:8-20

Help us?
Click on verse(s) to share them!
8ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.
9ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
10ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
11ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.
12ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
13ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
14ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.
15ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
16ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.
17ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
18ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
19ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
20ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

Read ಲೂಕ 1ಲೂಕ 1
Compare ಲೂಕ 1:8-20ಲೂಕ 1:8-20