Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 20

ಲೂಕ 20:14-28

Help us?
Click on verse(s) to share them!
14ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
15ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
16ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
17ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
18“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
19ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
20ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
21ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
23ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
24ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
25ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
26ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
27ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
28“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.

Read ಲೂಕ 20ಲೂಕ 20
Compare ಲೂಕ 20:14-28ಲೂಕ 20:14-28