Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 21

ಲೂಕ 21:18-27

Help us?
Click on verse(s) to share them!
18ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
19ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
20“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
22ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
23ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
24ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
25“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.
26ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
27ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.

Read ಲೂಕ 21ಲೂಕ 21
Compare ಲೂಕ 21:18-27ಲೂಕ 21:18-27