Text copied!
Bibles in Kannada

ಲೂಕ 21:8-24 in Kannada

Help us?

ಲೂಕ 21:8-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.
9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು.
10 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.
11 ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.
14 ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.
15 ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.
16 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.
17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.
18 ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.
19 ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.
20 “ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ.
21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.
22 ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.
23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
24 ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
ಲೂಕ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019