Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಲೂಕ - ಲೂಕ 22

ಲೂಕ 22:3-19

Help us?
Click on verse(s) to share them!
3ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
4ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
5ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,
6ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
7ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
8ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
9ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,
10ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
11ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
12ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
13ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
14ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
15ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
16ಇನ್ನು ದೇವರ ರಾಜ್ಯದಲ್ಲಿಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
17ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
18ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
19ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

Read ಲೂಕ 22ಲೂಕ 22
Compare ಲೂಕ 22:3-19ಲೂಕ 22:3-19